Friday, April 5, 2013

Wonders -13 by CS Dept Inaugurated

ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ವಂಡರ್ಸ್ -13’
ಸಮಾಜಮುಖಿಗಳಾಗಲು ವಿದ್ಯಾರ್ಥಿಗಳಿಗೆ ಕರೆ
ಹೊಸಪೇಟೆ:
ತಾಂತ್ರಿಕ ವಿದ್ಯಾರ್ಥಿಗಳು ಸಮಾಜಮುಖಿಗಳಾಗಬೇಕು ಎಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅರ್. ಬಸಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸ್ಥಳೀಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯಡ ಕಂಪ್ಯೂಟರ್ ಸೈನ್ಸ್ ವಿಭಾಗವು  ಆಯೋಜಿಸಿದ ವಂಡರ್ಸ್ -13 ಎಂಬ ಎರಡು ದಿನಗಳ ರಾಜ್ಯ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಭಾರತೀಯ ತಂತ್ರಜ್ಞರ ಸೇವೆಗೆ ವಿದೇಶಗಳಲ್ಲಿ ತೀವ್ರ ಬೇಡಿಕೆಯಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು. ಸಮಾಜಕ್ಕೆ ನೆರವಾಗುವ ಅವಿಷ್ಕಾರಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಭಾರತದ ಹಿರಿಮೆಯನ್ನು ಎತ್ತಿ ಹಿಡಿಯಬೇಕು ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರು ಬಸವರಾಜ್ ಮಾತನಾಡಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳಕಿಗೆ ತರಲು ಸೂಕ್ತ ವೇದಿಕೆಯಾಗಿವೆ ಎಂದರು.
ವೀ.ವಿ.ಸಂಘದ ಗೌರವ ಕಾರ್ಯದರ್ಶಿ ಎಚ್.ಎಂ.ಗುರುಸಿದ್ಧ ಸ್ವಾಮಿ, ಸಹಕಾರ್ಯದರ್ಶಿ ಜೆ.ಎಸ್.ನೇಪಾಕ್ಷಪ್ಪ, ಸಂಗನಕಲ್, ಕೋಶಾಧಿಕಾರಿ ಎಸ್. ಹಿಮಂತರಾಜ, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಅರವಿ ಬಸವನ ಗೌಡ, ಆಡಳಿತ ಮಂಡಳಿಯ ಸದಸ್ಯ ಕೆ.ಬಿ.ಶ್ರೀನಿವಾಸ ರೆಡ್ಡಿ, ಬಳ್ಳಾರಿಯ ಅರ್.ವೈ.ಎಂ.ಇ.ಸಿ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ವಿ.ಬಸವರಾಜ್, ಉದ್ಯಮಿ ತಿರುಪತಿ ರೆಡ್ಡಿ, ಪ್ರಾಂಶುಪಾಲ ಪ್ರೊ. ಪಾರ್ವತಿ ಕಡ್ಲಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ.ಜಿ.ವಸಂತಮ್ಮ ಮುಂತಾದವರು ಉಪಸ್ಥಿತರಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡಲು 50000 ರೂಪಾಯಿಗಳ ದೇಣಿಗೆ ನೀಡಿದ ಎಂಜಿನಿಯರ್ ಅರ್. ಬಸಪ್ಪ ಅವರನ್ನು ಸಮಾರಂಭದಲ್ಲಿ ಅವರನ್ನು ಸತ್ಕರಿಸಲಾಯಿತು. ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.


ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯವು ಆಯೋಜಿಸಿದ ವಂಡರ್ಸ್ -13 ಎಂಬ ಎರಡು ದಿನಗಳ ರಾಜ್ಯ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಿರುವ ವೀ.ವಿ.ಸಂಘದ ಅಧ್ಯಕ್ಷ ಅಲ್ಲಂ ಗುರು ಬಸವರಾಜ್; ವೀ.ವಿ.ಸಂಘದ ಗೌರವ ಕಾರ್ಯದರ್ಶಿ ಎಚ್.ಎಂ.ಗುರುಸಿದ್ಧ ಸ್ವಾಮಿ, ಸಹಕಾರ್ಯದರ್ಶಿ ಜೆ.ಎಸ್.ನೇಪಾಕ್ಷಪ್ಪ, ಸಂಗನಕಲ್, ಕೋಶಾಧಿಕಾರಿ ಎಸ್. ಹಿಮಂತರಾಜ, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಅರವಿ ಬಸವನ ಗೌಡ, ಆಡಳಿತ ಮಂಡಳಿಯ ಸದಸ್ಯ ಕೆ.ಬಿ.ಶ್ರೀನಿವಾಸ ರೆಡ್ಡಿ, ಬಳ್ಳಾರಿಯ ಅರ್.ವೈ.ಎಂ.ಇ.ಸಿ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ವಿ.ಬಸವರಾಜ್, ಉದ್ಯಮಿ ತಿರುಪತಿ ರೆಡ್ಡಿ, ಪ್ರಾಂಶುಪಾಲ ಪ್ರೊ. ಪಾರ್ವತಿ ಕಡ್ಲಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ.ಜಿ.ವಸಂತಮ್ಮ ಮುಂತಾದವರು ಉಪಸ್ಥಿತರಿದ್ದರು.

ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರು ಬಸವರಾಜ್ ಅವರು ಮಾತನಾಡಿದರು.

ವೀ.ವಿ.ಸಂಘದ ಗೌರವ ಕಾರ್ಯದರ್ಶಿ ಎಚ್.ಎಂ.ಗುರುಸಿದ್ಧ ಸ್ವಾಮಿ ಅವರು ಮಾತನಾಡಿದರು.
 

No comments:

Post a Comment